ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್‌ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್‌, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್…