“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ .

“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ .

“ಚಂದ್ರಮುಖಿ ಪ್ರಾಣಸಖಿ” ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ “ಹಂಸಗೀತೆ” ಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ…

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

” ಬೊಂಬಾಟ್ ಭೋಜನ” ಕ್ಕೆ ಸಾವಿರದ ಸಂಭ್ರಮ . ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ .

ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್‍ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ…