ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ದೈವ”.ಶ್ರೀ ಗುರು ಸಾರ್ವಭೌಮ ರಾಘವೇಂದ್ರ ಸ್ವಾಮಿಗಳ ಆಶೀರ್ವಾದದಿಂದ ಅನಾವರಣವಾಯ್ತು ದೈವ ಚಿತ್ರದ ಹಾಡು.
MJ ಜಯರಾಜ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಫೆಬ್ರವರಿ 12ರಂದು ತೆರೆಗೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ MJ ಜಯರಾಜ್ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದೈವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕರ ತಾಯಿ ಹಾಗೂ ನಿರ್ಮಾಪಕಿ ಜಯಮ್ಮ ಪದ್ಮರಾಜ್ ಅವರೆ ಟ್ರೇಲರ್ ಬಿಡುಗಡೆ ಮಾಡಿ, ಮಗ MJ ಜಯರಾಜ್ ನಿರ್ದೇಶನದ ಜೊತೆಗೆ…
