ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ “ಒಂದೆ ಒಂದು ಸಲ” ಹಾಡಿಗೆ ಅಭಿಮಾನಿಗಳು ಫಿದಾ. .
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ “ಒಂದೆ ಒಂದು ಸಲ” ಎಂಬ ಸುಮಧುರ ಯುಗಳ ಗೀತೆ “ಸರಿಗಮಪ” ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಅವರು ಹಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತು ಮಾಸ್ಟರ್ ನೃತ್ಯ…