ದೀಕ್ಷಿತ್ ಶೆಟ್ಟಿ ಅಭಿನಯದ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಅನಿಮೇಷನ್ ಟೀಸರ್ ಗೆ ಮೆಚ್ಚುಗೆಯ ಮಹಾಪೂರ .
ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಅನಿಮೇಷನ್ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು…