ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ತೆರೆಗೆ .ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ .
ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ “ಉಸಿರೇ ಉಸಿರೇ” ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ. ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ಈಗ ಬಿಡುಗಡೆ…