ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ ಟ್ರೇಲರ್. . ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ….