ಧರ್ಮ ಕೀರ್ತಿರಾಜ್ ಅವರಿಂದ ಅನಾವರಣವಾಯಿತು “ಲೇಡಿಸ್ ಬಾರ್” ಚಿತ್ರದ ಟ್ರೇಲರ್ .
ಡಿ.ಎಂ.ಸಿ. ಪ್ರೊಡಕ್ಷನ್ಸ್ ಮೂಲಕ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ “ಲೇಡಿಸ್‌ಬಾರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಧರ್ಮ ಕೀರ್ತಿರಾಜ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟ್ರೇಲರ್ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಧರ್ಮ ಕೀರ್ತಿರಾಜ್, ಟ್ರೇಲರ್ ಚೆನ್ನಾಗಿದೆ. ನಿರ್ದೇಶಕ…