ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ
ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ…