ಏಪ್ರಿಲ್ 19 ರಂದು ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್”.
ತಮ್ಮ ಅಮೋಘ ಗಾಯನದಿಂದ ವಿಶ್ವದೆಲ್ಲೆಡೆ ಮನೆಮಾತಾಗಿದ್ದ ಖ್ಯಾತ ಗಾಯಕ ರಾಜು ಅನಂತಸ್ವಾಮಿ ಅವರ ನೆನಪಿನಲ್ಲೊಂದು ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್” ಎಂಬ ಹೆಸರಿನಲ್ಲಿ ಏಪ್ರಿಲ್ 19 ರಂದು ಕೋಣನ ಕುಂಟೆ ಬಳಿಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಹೆಸರಾಂತ ಡ್ರಮರ್ ಮಂಜನಾಥ್ ಸತ್ಯಶೀಲ್ ಹಾಗೂ ಖ್ಯಾತ ಗಾಯಕಿ ಅನನ್ಯ ಭಟ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ,…