‘ಫಾದರ್’ ಟೀಸರ್ಗೆ ಹೆಚ್ಚಿದ ನಿರೀಕ್ಷೆ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಕಾಂಬಿನೇಷನ್ಗೆ ಭಾರೀ ಕುತೂಹಲ
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಗಳು ಹಾಗೂ ಕ್ಲಾಸ್ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ನಿರ್ಮಾಪಕ ಆರ್. ಚಂದ್ರು ಅವರು ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫಾದರ್’. ‘ತಾಜ್ ಮಹಲ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಆರ್. ಚಂದ್ರು ಹಾಗೂ ‘ಲವ್ ಮಾಕ್ಟೇಲ್’ ಸರಣಿಯ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ಈಗಾಗಲೇ ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ….
