ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ “ಫಾರೆವರ್”ಗೆ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ “ಫಾರೆವರ್”. ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ ಕೃಷ್ಣ) ನಿರ್ಮಿಸುತ್ತಿರುವ ಹಾಗೂ “ಚಂದ್ರಿಕ” ಚಿತ್ರದ ಖ್ಯಾತಿಯ ಯೋಗೇಶ್ ಎಂ ನಿರ್ದೇಶಿಸುತ್ತಿರುವ “ಫಾರೆವರ್” ಚಿತ್ರದ ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರನಲ್ಲೇ ಚಿತ್ರೀಕರಣ ನಡೆದಿದೆ. ಹೆಸರಾಂತ ನಿರ್ದೇಶಕ ರವಿವರ್ಮ ಅವರ ಸಾಹಸ ಸಂಯೋಜನೆಯಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶ ಹಾಗೂ ಖ್ಯಾತ ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಅವರ ನೃತ್ಯ…
