ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ.
ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. “ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ & ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ…