ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ.
1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”. ಆ ವರ್ಷ ರಾಷ್ಟ್ರ್ರ ಪ್ರಶಸ್ತಿ ಸ್ಪರ್ಧೆಯಲ್ಲಿದ್ದ ಘಟಾನುಘಟಿ ಚಿತ್ರನಿರ್ದೇಶಕರುಗಳಾದ ಸತ್ಯಜಿತ್ ರೇ, ಮೃಣಾಲ್ ಸೆನ್, ಶ್ಯಾಮ್ ಬೆನೆಗಲ್, ಅಡೂರ್ ಗೋಫಾಲಕೃಷ್ಣನ್, ಅರವಿಂದನ್, ಜಾನ್ ಅಬ್ರಹಾಂ, ಗಿರೀಶ್ ಕಾರ್ನಾಡ್ ಅವರ ಚಿತ್ರಗಳ ಜೊತೆ ಸ್ಪರ್ಧಿಸಿ ಸ್ವರ್ಣಪದಕ ಪಡೆದ ಈ ಚಿತ್ರ ಗಿರೀಶ್ ಕಾಸರವಳ್ಳಿಯವರ ಪ್ರಥಮ ಚಿತ್ರವೂ ಹೌದು. ಅವರಿಗೆ ಕೇವಲ 26 ವರ್ಷವಾಗಿದ್ದಾಗ ನಿರ್ದೇಶಿಸಿದ ಈ…