ಶ್ರೇಯಾ ಘೋಶಾಲ್ ಕಂಠಸಿರಿಯಲ್ಲಿ “ಬೃಂದಾವಿಹಾರಿ” ಚಿತ್ರದ “ನಾದಸುನಾದ” ಹಾಡು.ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಅಕ್ಟೋಬರ್ 16 ರಂದು ತೆರೆಗೆ .
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹು ನಿರೀಕ್ಷಿತ “ಬೃಂದಾ ವಿಹಾರಿ” ಚಿತ್ರದ “ನಾದನಿನಾದ” ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ಈ ಹಾಡನ್ನು ಹೆಸರಾಂತ ಗಾಯಕಿ ಶ್ರೇಯಾ ಘೋಶಾಲ್ ಹಾಡಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ….
