ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡು . ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ .

ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಶ್ರೀಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ…