ಶ್ರುತಿ ಹರಿಹರನ್ ಅವರಿಂದ ಅನಾವರಣವಾಯಿತು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಾಡು.
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ…