“ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ನಟಿಸುತ್ತಿರುವ “ಉಗ್ರಾಯುಧಮ್” ಚಿತ್ರಕ್ಕೆ ಅದ್ದೂರಿ ಚಾಲನೆ. .
ಜಯರಾಮ್ ದೇವಸಮುದ್ರ ನಿರ್ಮಾಣದ ಏಳು ಶತಮಾನಗಳ ಹಿಂದಿನ ಈ ಪಿರಿಯಾಡಿಕ್ ಡ್ರಾಮ ಕಥಾನಕಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಪುನೀತ್ ರುದ್ರನಾಗ್ .ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ “ಉಗ್ರಾಯುಧಮ್” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್…