ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ.
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ…