‘800’ – ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಜೀವನಗಾಥೆ ಜಿಯೊಸಿನಿಮಾದಲ್ಲಿ ! ಮುತ್ತಯ್ಯ ಮುರಳೀಧರನ್ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ ‘800’ ಸಿನಿಮಾವನ್ನು ಡಿಸೆಂಬರ್ 2ರಿಂದ ಜಿಯೊಸಿನಿಮಾದಲ್ಲಿ ಕನ್ನಡದಲ್ಲಿಯೇ ನೋಡಿ.
ವೈವಿಧ್ಯಮಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಹೊಂದಿರುವ ಕಂಟೆಂಟ್ ಅನ್ನು ಜನರಿಗೆ ನೀಡುವಲ್ಲಿ JioCinema ಮುಂಚೂಣಿಯಲ್ಲಿದೆ. ಆ ಪ್ರಯತ್ನದ ಭಾಗವಾಗಿ ಇದೀಗ, ಮುತ್ತಯ್ಯ ಮುರಳೀಧರನ್ ಅವರ ಜೀವನವನ್ನಾಧರಿಸಿದ, ಎಂ.ಎಸ್. ಶ್ರೀಪತಿ ನಿರ್ದೇಶಿಸಿರುವ ‘800’ ಸಿನಿಮಾ JioCinemaದಲ್ಲಿ ಬಿಡುಗಡೆಗೊಳ್ಳುತ್ತಿದೆ. ಇದೇ ಡಿಸೆಂಬರ್ 2ರಂದು JioCinema ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ, ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ್ದು. ಟೆಸ್ಟ್ ಕ್ರಿಕೆಟ್ನಲ್ಲಿ 800 ವಿಕೆಟ್ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದ ಬೌಲರ್ ಬದುಕಿನ…