ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ.

ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ರೇಲರ್ ಬಿಡುಗಡೆ ಮಾಡಬೇಕಿತ್ತು.‌ ಕಾರಣಾಂತರದಿಂದ ಅವರು ಸಮಾರಂಭಕ್ಕೆ ಬಂದಿರಲಿಲ್ಲ . ಟ್ರೇಲರ್ ಅನ್ನು ನಿರ್ಮಾಪಕರ ತಾಯಿ ಶ್ರೀಮತಿ ಪ್ರೇಮ ಬಿಡುಗಡೆ ಮಾಡಿದರು. ಟ್ರೇಲರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ನೋಡಿದವರು ಇದು “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್ ಎನ್ನುತ್ತಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲೇ ಚಿತ್ರದ “ನೋಡಿದ…