ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ .
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ರಂಗ ಸಮುದ್ರ” ಚಿತ್ರದ ಟ್ರೇಲರ್ ಅನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರಾಘವೇಂದ್ರ ರಾಜಕುಮಾರ್, ಇಂತಹ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ಮೊದಲ ಸೆಲ್ಯೂಟ್. ಇನ್ನು ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಭಾಗ್ಯ. ಈ ಚಿತ್ರ ಯಶಸ್ವಿಯಾಗಲಿ….