“ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ .
“ಕನ್ನಡತಿ” ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ “ಮೇಘ” ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ಮೇಘ” ಚಿತ್ರದ ಕುರಿತು ಮಾತನಾಡಿದರು. ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ಡಾ||ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ಇನ್ನು “ಮೇಘ”…