ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಹಿರಿತೆರೆ ಹಾಗೂ ಕಿರುತೆರೆತಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. “ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ( ತಮಿಳುನಾಡು), ಸೋನಿ(ಸಿಂಗಾಪುರ), ಪುಷ್ಪ(ಬೆಂಗಳೂರು) ಸೇರಿದಂತೆ ಅನೇಕ ಅಭಿಮಾನಿಗಳು ಅನಿರುದ್ದ್ ಅವರಿಗೆ ಆತ್ಮೀಯ ಅಭಿನಂದನಾ ಸಮಾರಂಭವನ್ನು ಆಯೋಜಿಸಿ,‌ ನ್ಯಾಚುರಲ್ ಸ್ಟಾರ್ ಎಂಬ…

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ

ಬೋಯಾಪಾಟಿ ಶ್ರೀನಿ, ರಾಮ್‍ ಪೋತಿನೇನಿ ಜೋಡಿಯ ‘ಸ್ಕಂದ’ ಚಿತ್ರದಲ್ಲಿ ‘ಬೆಂಕಿ ಕಂಗಳ ನಟ ’ ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ ಶ್ರೀನು ನಿರ್ದೇಶನದ, ರಾಮ್‍ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಡ್ಯಾನಿಗೆ ಟಾಲಿವುಡ್‍ ಹೊಸದೇನಲ್ಲ. ‘ಬಾಹುಬಲಿ’ ಚಿತ್ರದ ಮೂಲಕ ತೆಲುಗಿಗೆ ಹೊರಟ ಅವರು, ನಂತರ ‘ಗದ್ದಲಕೊಂಡ ಗಣೇಶ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಈಗ…

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್

27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ ” ಗರುಡ ಪುರಾಣ” ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಾನು “ಕಾಂತಾರ”…

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಮಾತಿನ ಭಾಗದ ಚಿತ್ರೀಕರಣ, ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಈ ಚಿತ್ರದ ಸಾಹಸ ನಿರ್ದೇಶಕರು. ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್…