ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ದಿನ ತೆರೆಗೆ ಬರಲಿದೆ “ಪಾಠಶಾಲಾ” .
ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಸೂಕ್ಷ್ಮ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು “ಪಾಠಶಾಲಾ” ಕುರಿತು ಮಾತನಾಡಿದರು. “ಪಾಠಶಾಲಾ” ಎನ್ನುವ ಹೆಸರು ಇದೆ ಎಂದ ಮಾತ್ರಕ್ಕೆ ಇದು ಮಕ್ಕಳ ಚಿತ್ರ ಅಲ್ಲ ಎಂದು ಮಾತನಾಡಿದ ನಿರ್ದೇಶಕ ಹೆದ್ದೂರು ಮಂಜುನಾಥ ಶೆಟ್ಟಿ, ಈಗಿನ ಶಿಕ್ಷಣ 80 ರ ದಶಕದಲ್ಲಿ ಇದ್ದ ಹಾಗೆ…