ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ . ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ.
ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ. ಆಡಿಯೋ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಕುಶಾಲ್ ಮುಂತಾದವರು…