ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .
ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ….