“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .ಹಾಡು ಬಿಡುಗಡೆ ಮಾಡಿ ಹಾರೈಸಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ
ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್…