ಹರಿದಾಸರ ಚಿತ್ರಗಳ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನದ ಮುಂದಿನ ಚಿತ್ರ “ನಮ್ಮ ರಾಯರು”. .
ರಾಯರ ಮಹಿಮೆಯನ್ನು ಸಾರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭ . ನಾಡಿನ ಶ್ರೇಷ್ಠ ಹರಿದಾಸರ ಜೀವನ ಚರಿತ್ರೆಯನ್ನು ಸಿನಿಮಾ ಮೂಲಕ ಜನರಿಗೆ ತಲುಪಿಸಿದವರು ಮಧುಸೂದನ್ ಹವಾಲ್ದಾರ್. ಅವರ ಮುಂದಿನ ನಿರ್ದೇಶನದ ಚಿತ್ರ ” ನಮ್ಮ ರಾಯರು”. ಪ್ರಸ್ತುತ ಈ ಚಿತ್ರದ ಚಿತ್ರೀಕರಣಕ್ಕೆ ಬೆಂಗಳೂರಿನಲ್ಲಿ ಚಾಲನೆ ದೊರಕಿದೆ. ನಮ್ಮ ಮಾತಾಂಬುಜ ಮೂವೀಸ್ ಮೂಲಕ ನಿರ್ಮಾಣವಾಗುತ್ತಿರುವ ಆರನೇ ಚಿತ್ರ “ನಮ್ಮ ರಾಯರು”. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ಸಂಗೀತ ಸಂಯೋಜಿಸುವುದರ ಜೊತೆಗೆ ನಿರ್ಮಾಣ ಹಾಗೂ ನಿರ್ದೇಶನವನ್ನು…
