ಮಹಾನ್ ಚಿತ್ರದಲ್ಲಿ ಮಹಾನ್ ನಟರು
ಆಕಾಶಾ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ ಹಾಗೂ ಶಿವರಾಜ್ ಕುಮಾರ್ ಮತ್ತು ವಿಜಯ್ ರಾಘವೇಂದ್ರ ನಟಿಸಿರುವ “ಮಹಾನ್” ಚಿತ್ರದಲ್ಲಿ ಹಲವು ವಿಶೇಷಗಳಿದೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ, ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ “ಮಹಾನ್” ನಟರಾದ ದೇವರಾಜ್, ರಮೇಶ್ ಭಟ್, ಅವಿನಾಶ್, ರಂಗಾಯಣ ರಘು, ಶರತ್ ಲೋಹಿತಾಶ್ವ ಹಾಗೂ ರಮೇಶ್ ಇಂದಿರಾ ನಟಿಸಿದ್ದಾರೆ. ಈ ಆರು ಜನ ಕಲಾವಿದರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದು, ಇತ್ತೀಚೆಗೆ ಈ ಆರು ಕಲಾವಿದರ ಫಸ್ಟ್ ಲುಕ್ ಅನಾವರಣವಾಗಿದೆ. ಪಾತ್ರದ…
