ಅರ್ಜುನ್ ಜನ್ಯ ಅವರಿಂದ ಅನಾವರಣವಾಯಿತು ‘ಮಹಾಕವಿ’ ಚಿತ್ರದ ಹಾಡುಗಳು .
ಇದು ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ 25 ನೇ ಚಿತ್ರ ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ ಚಿತ್ರದ ಹಾಡುಗಳನ್ನು ಅನಾವರಣ ಮಾಡಿದರು. ಶಮಿತಾ ಮಲ್ನಾಡ್ “ಮಹಾಕವಿ” ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಿಶೋರ್ ಹಾಗೂ ಅನುಷಾ ರೈ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಹಾಡುಗಳ ಬಿಡುಗಡೆ ನಂತರ ಅತಿಥಿಗಳು ಹಾಗೂ…
