‘ರಾಜಸ್ಥಾನ್’ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ತಾರಿಣಿ” ಆಯ್ಕೆ.
_ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ರವರು ಮತ್ತೊಂದು ಅಂತಹದೇ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ “ತಾರಿಣಿ”. ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ “ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ಗೆ ‘ತಾರಿಣಿ’ ಆಯ್ಕೆಯಾಗಿದೆ ಎಂದು ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಜನವರಿ ತಿಂಗಳಲ್ಲಿ ರಾಜಸ್ಥಾನದ ‘ಜೈಪುರ್” ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ರವರು…