“ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ . ಕನ್ನಡದಲ್ಲಿ ಮತ್ತೊಂದು ಗ್ರಾಮೀಣ ಸೊಗಡಿನ ಚಿತ್ರ.
ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೇಲರ್ ಸಿರಿ ಮ್ಯೂಸಿಕ್ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್(ಬಹದ್ದೂರ್) ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಮಂಡ್ಯ ಜಿಲ್ಲೆಯ ಕೀಲಾರದವನು ಎಂದು ಮಾತನಾಡಿದ ನಿರ್ದೇಶಕ ವಿಜಯ್ ಕೀಲಾರ, “ದಾಸಪ್ಪ” ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಎಲ್ಲಾ ಹಳ್ಳಿಗಳಲ್ಲಿ ಯಾವುದೇ ಕಾರ್ಯವಾದರೂ “ದಾಸಪ್ಪ”…