ಅದ್ದೂರಿಯಾಗಿ ಬಿಡುಗಡೆಯಾಯಿತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ “Lions roar” ಹಾಡು . ಬಹು ನಿರೀಕ್ಷಿತ ಈ ಚಿತ್ರ ಡಿಸೆಂಬರ್ 25ರಂದು ಬಿಡುಗಡೆ.
ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions roar” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಓರಾಯನ್ ಮಾಲ್ ನ ಆವರಣದಲ್ಲಿರುವ ಕೆರೆಯಂಗಳದಲ್ಲಿ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. “ಮ್ಯಾಕ್ಸ್”…