“ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಇಷ್ಟಪಟ್ಟಿದ್ದಿರಿ. “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ. ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಭೈರತಿ ರಣಗಲ್” ಚಿತ್ರ ದೂರ ಮಾಡಿದೆ. ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ….