ವಿಷಯಲ್ ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸಂಯುಕ್ತ ಹೆಗಡೆ ಅಭಿನಯದ “ಕ್ರೀಂ” ಚಿತ್ರ.
“ಕಿರಿಕ್ ಪಾರ್ಟಿ” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ಸಂಯುಕ್ತ ಹೆಗಡೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಕ್ರೀಂ” ಚಿತ್ರದ ವಿಷುಯಲ್ ಟ್ರೇಲರ್ ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಅಗ್ನಿ ಶ್ರೀಧರ್ ಈ ಚಿತ್ರದ ವಿಷುಯಲ್ ಟ್ರೇಲರ್ ಬಿಡುಗಡೆ ಮಾಡಿದರು. ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ. ಈ ಚಿತ್ರದ ಬಗ್ಗೆ ತುಂಬಾ ಭರವಸೆಯಿಟ್ಟುಕೊಂಡಿದ್ದೇನೆ ಎಂದು ಮಾತು ಆರಂಭಿಸಿದ…