ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” .
ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ” ಫೈಟರ್ ” ಚಿತ್ರ ಕಳೆದವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ನಮ್ಮ ಚಿತ್ರವನ್ನು ನೋಡಿ ಹಾರೈಸುತ್ತಿರುವ ಎಲ್ಲರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ನೂತನ್ ಉಮೇಶ್, ಬಿಡುಗಡೆಯಾದ ದಿನದಿಂದಲೂ “ಫೈಟರ್” ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಜನ ಚಿತ್ರವನ್ನು ಪ್ರೀತಿಸುತ್ತಿದ್ದಾರೆ. ಚಿತ್ರದಲ್ಲಿರುವ ಸಾಕಷ್ಟು ಉತ್ತಮ…