ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ‘ON ಡ್ಯೂಟಿ’. ಕುಟುಂಬದ ಹೊಣೆಗಾರಿಕೆಯೇ ಚಿತ್ರದ ವಿಶೇಷತೆ
ವಿಜಯ ರಾಘವೇಂದ್ರ ವಿಭಿನ್ನ ಪಾತ್ರದಲ್ಲಿ; ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಜೊತೆಗೆ ಭಾವನಾತ್ಮಕ ಕಥಾಹಂದರ ವಿಜಯ ರಾಘವೇಂದ್ರ ನಾಯಕನಾಗಿ ನಟಿಸುತ್ತಿರುವ ‘ON ಡ್ಯೂಟಿ’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ. ಮಾಕಿನೇನಿ ಸಾಯಿ ಕೃಷ್ಣರಾಜು ನಿರ್ಮಾಣದಲ್ಲಿ, ಸಂಜೀವ್ ಮೆಗೋಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಹಾಗೂ ಭಾವನಾತ್ಮಕ ಅಂಶಗಳನ್ನು ಒಳಗೊಂಡಿದೆ. ಇತ್ತೀಚೆಗೆ ಮಾಗಡಿ ರಸ್ತೆಯ ಸಾಮಿಲ್ವೊಂದರಲ್ಲಿ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ವಿಜಯ ರಾಘವೇಂದ್ರ, ಕೃಷ್ಣಸಾಯಿ, ಸ್ಮೃತಿ ವೆಂಕಟೇಶ್, ಭಾವನ…
