ಮಾತಿನಮನೆಯಲ್ಲಿ “ದ ಜಡ್ಜ್ ಮೆಂಟ್” .
ಜಿ 9 ಕಮ್ಯುನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ “ದ ಜಡ್ಜ್ ಮೆಂಟ್” ಚಿತ್ರಕ್ಕೆ ಮಾತಿನ ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದಲ್ಲಿ…