ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” . “ಸೂಪರ್ ಹೀರೋ” ಕಾನ್ಸೆಪ್ಟ್ ನ ಈ ಚಿತ್ರಕ್ಕೆ ಪವನ್ ಕುಮಾರ್ ನಿರ್ದೇಶನ .ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” .
ಪುಣ್ಯ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಪವನ್ ಕುಮಾರ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನಡೆಯಿತು.”ಸೂಪರ್ ಹೀರೋ ” ಕಾನ್ಸೆಪ್ಟ್ ನ ಈ ಚಿತ್ರಕ್ಕೆ “ದಿ ಎಂಡ್” ಎಂದು ಹೆಸರಿಡಲಾಗಿದೆ. ಚಿತ್ರದ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಕನ್ನಡಪರ ಹೋರಾಟಗಾರ ಭೀಮಶಂಕರ್ ಅವರು ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. “ದಿ…