*ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ .
ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ಆರಂಭ* . “ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ “ಮಹಾನ್” ಚಿತ್ರವನ್ನು ನಿರ್ಮಿಸುತ್ತಿರುವ ಪ್ರಕಾಶ್ ಬೂದೂರು, ಈಗ ನೂತನ ಚಿತ್ರವನ್ನು ಆರಂಭಿಸಿದ್ದಾರೆ. “ಮಹಾನ್” ಚಿತ್ರದ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿದ್ದಾರೆ. ಶೇಷಾದ್ರಿಪರಂನ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸರಳ ಪೂಜಾ ಸಮಾರಂಭದೊಂದಿಗೆ ಈ ಚಿತ್ರಕ್ಕೆ ಚಾಲನೆ ದೊರೆಯಿತು. ನಿರ್ಮಾಪಕ ಪ್ರಕಾಶ್ ಬೂದೂರು, ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಾಯಕ ಡಾರ್ಲಿಂಗ್ ಕೃಷ್ಣ…
