PEDDI ಚಿತ್ರದ ಮೂಲಕ ವಿದೇಶಿ ವಿತರಣೆ ಕ್ಷೇತ್ರಕ್ಕೆ ಮೊದಲ ಹೆಜ್ಜೆ ಇಟ್ಟ ಹೊಂಬಾಳೆ ಫಿಲ್ಮ್ಸ್
ಭಾರತೀಯ ಸಿನೆಮಾದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಇತ್ತೀಚೆಗೆ ವಿದೇಶಿ ವಿತರಣೆ ಕ್ಷೇತ್ರಕ್ಕೆ ಕಾಲಿಡುವುದಾಗಿ ಘೋಷಿಸಿತ್ತು. ಇದೀಗ ಆ ಮಹತ್ವದ ಪ್ರಯಾಣಕ್ಕೆ ಮೊದಲ ಚಿತ್ರವಾಗಿ PEDDI ಆಯ್ಕೆಯಾಗಿದೆ. Rajakumara, KGF, Kantara, Salaar ಸಿನಿಮಾಗಳ ಮೂಲಕ ಭಾರತೀಯ ಸಿನೆಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೊಂಬಾಳೆ ಫಿಲ್ಮ್ಸ್, ಇದೀಗ ಮತ್ತೊಂದು ದೊಡ್ಡ ಹೆಜ್ಜೆಯಾಗಿ ಅಂತರರಾಷ್ಟ್ರೀಯ ವಿತರಣೆ ಕ್ಷೇತ್ರಕ್ಕೆ ಪ್ರವೇಶಿಸಿದೆ. 2026ರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಒಂದಾದ PEDDI ಚಿತ್ರದ ವಿದೇಶಿ ವಿತರಣೆಯ ಹಕ್ಕುಗಳನ್ನು ಸಂಸ್ಥೆ ತನ್ನದಾಗಿಸಿಕೊಂಡಿದೆ….
