ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .
ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ…