ಯುವ ರಾಜಕುಮಾರ್ ಈಗ “ಪವರ್ ಮ್ಯಾನ್”
ಗಣೇಶನ ಹಬ್ಬದಂದು ಅನಾವರಣವಾಯಿತು ತರುಣ್ ಸುಧೀರ್ – ಜಗದೀಶ್ ಗೌಡ ನಿರ್ಮಾಣದ ಹಾಗೂ ಜಡೇಶ್ ಕೆ ಹಂಪಿ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ. ತರುಣ್ ಸುಧೀರ್ ಹಾಗೂ ಜಗದೀಶ್ ಗೌಡ ಅವರ ನಿರ್ಮಾಣದಲ್ಲಿ, ಜಡೇಶ್ ಕೆ ಹಂಪಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನೂತನ ಚಿತ್ರದಲ್ಲಿ ಯುವ ರಾಜಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ವಿಷಯ ಇತ್ತೀಚೆಗೆ ತಿಳಿದು ಬಂದಿತ್ತು. ಈ ಚಿತ್ರದ ಶೀರ್ಷಿಕೆ ಏನಿರಬಹುದು? ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ….
