ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು “ಉಸಿರೇ ಉಸಿರೇ” ಚಿತ್ರದ ಟ್ರೇಲರ್ . ಇದು ರಾಜೀವ್ ಹನು ಅಭಿನಯದ ಚಿತ್ರ.
ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕನಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರದ ಟ್ರೇಲರ್ ಇತ್ತೀಚಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಕಿಚ್ಚ ಸುದೀಪ್, “ಉಸಿರೇ ಉಸಿರೇ” ನನ್ನ ಗೆಳೆಯ ರಾಜೀವ್ ನಾಯಕನಾಗಿ ನಟಿಸಿರುವ ಚಿತ್ರ. ಟ್ರೇಲರ್ ಚೆನ್ನಾಗಿದೆ. ದೇವರಾಜ್, ತಾರಾ, ಬ್ರಹ್ಮಾನಂದಂ, ಅಲಿ ಮುಂತಾದ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ನಾನು ಕೂಡ…