ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ
ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ…