ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ.

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ಹಾಡು ಕನ್ನಡದಲ್ಲಿ ಇದೇ ಮೊದಲು ಎನ್ನುವುದು…