ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” .ಬಹು ನಿರೀಕ್ಷಿತ ಈ ಚಿತ್ರ ಮೇ 24 ರಂದು ದೇಶಾದ್ಯಂತ ಬಿಡುಗಡೆ .
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ”…