“ಸಂಭವಾಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ.ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ ಮಾತೇ ಈ ಚಿತ್ರದ ಶೀರ್ಷಿಕೆ .

“ಸಂಭವಾಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ.ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ ಮಾತೇ ಈ ಚಿತ್ರದ ಶೀರ್ಷಿಕೆ .

ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌. ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು…

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಾಂತಾರ ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆ. ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸರಳಪೂಜೆಯೊಂದಿಗೆ ಚಿತ್ರಕ್ಕೆ ಚಾಲನೆ‌

ಕಳೆದ ವರ್ಷ ಬಿಡುಗಡೆಯಾಗಿ ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ ೧’ರ ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಭ್ ಶೆಟ್ಟಿ ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ…

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍…

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್ .

ಜನಮೆಚ್ಚುಗೆ ಪಡೆಯುತ್ತಿದೆ “ಜಲಪಾತ” ಟ್ರೇಲರ್ .

ಪರಿಸರದ ಕುರಿತು ಜಾಗೃತಿ ಮೂಡಿಸುವ ಈ ಚಿತ್ರ ಅಕ್ಟೋಬರ್ 6ರಂದು ತೆರೆಗೆ . ಮಲೆನಾಡ ಸುಂದರ ಪರಿಸರದ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಹಾಗೂ ಪತ್ರಕರ್ತ ಜೋಗಿ, ನಟ ಪೃಥ್ವಿ ಶಾಮನೂರು “ಜಲಪಾತ” ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಬಹುಕೋಟಿ ಸಿನಿಮಾಗಳ ಕುರಿತು ಮಾತಾಡಲಾರೆ. ನನಗೆ ಸಣ್ಣ ಸಿನಿಮಾ ಮಾಡುವವರೆಂದರೆ ಅಕ್ಕರೆ. ಯಾಕೋ ನಿಜವಾದ ಸಿನಿಮಾ ಪ್ರೀತಿ ಕಂಟೆಂಟ್ ಸಿನಿಮಾ ಮಾಡುವವರಲ್ಲಿ ಹೆಚ್ಚು…

ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರಕ್ಕೆ ಮಾತಿನ ಮರು ಜೋಡಣೆ(ಡಬ್ಬಿಂಗ್) ಮುಕ್ತಾಯ .

ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರಕ್ಕೆ ಮಾತಿನ ಮರು ಜೋಡಣೆ(ಡಬ್ಬಿಂಗ್) ಮುಕ್ತಾಯ .

“ಜಲಂಧರ” ಚಿತ್ರತಂಡ ಇತ್ತೀಚೆಗೆ ಪ್ರಮೋದ್ ಶೆಟ್ಟಿ ಅವರ ಹುಟ್ಟು ಹಬ್ಬದ ಉಡುಗೊರೆಯಾಗಿ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿತ್ತು. ಚಿತ್ರದ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ  ಜನಪ್ರಿಯತೆ ಗಳಿಸಿದ ಬೆನ್ನಲ್ಲೆ  “ಜಲಂಧರ” ಚಿತ್ರತಂಡ, ಮಾತಿನ ಮರು ಜೋಡಣೆ ( ಡಬ್ಬಿಂಗ್ ) ಅನ್ನು  ಯಶಸ್ವಿಯಾಗಿ  ಪೂರ್ಣಗೊಳಿಸಿದ ಖುಷಿಯಲ್ಲಿದ್ದಾರೆ. ಸ್ಟೇಪ್ ಅಪ್ ಲೋಕೇಶ್ ನಟಿಸಿ, ಕತೆ ಬರೆದು ಸ್ಟೇಪ್ ಅಪ್ ಪಿಚ್ಚರ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡುತ್ತಿರುವ “ಜಲಂಧರ” ಚಿತ್ರಕ್ಕೆ ಮದನ್ ಎಸ್, ಚಂದ್ರ ಮೋಹನ್ ಸಿ ಎಲ್,…