“ಸೆಪ್ಟೆಂಬರ್ 21” ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್ . ಪ್ರಿಯಾಂಕ ಉಪೇಂದ್ರ ಅಭಿನಯದ ಹಾಗೂ ಕರೆನ್ ಕ್ರಿಷ್ಠಿ ಸುವರ್ಣ ನಿರ್ದೇಶನದ ಈ ಚಿತ್ರ ಮೇ 22 ರಂದು ತೆರೆಗೆ .
ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಪ್ರಿಯಾಂಕಾ ಉಪೇಂದ್ರ ಅವರು ನಟಿಸಿರುವ ಹಾಗೂ 22 ವರ್ಷದ ಕರೆನ್ ಕ್ರಿಷ್ಠಿ ಸುವರ್ಣ ನಿರ್ದೇಶಿಸಿರುವ “ಸೆಪ್ಟೆಂಬರ್ 21” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಮೇ 22 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಚಿತ್ರದ ಪತ್ರಿಕಾಗೋಷ್ಠಿಗೆ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಹ ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಸೆಪ್ಟೆಂಬರ್ 21” ಹಿಂದಿ…
